ಸ್ಯಾಂಡಲ್ವುಡ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೂ ಕರೊನಾ ಪಾಸಿಟಿವ್ ದೃಢಪಟ್ಟಿದೆ. ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ
ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ.












