Rewa Tribal Woman Video : ರಸ್ತೆ ಇಲ್ಲ, ಆಂಬ್ಯುಲೆನ್ಸ್ ಸಿಗಲಿಲ್ಲ: ಮಧ್ಯಪ್ರದೇಶದಲ್ಲಿ ಮಂಚದ ಮೇಲೆಯೇ ಪ್ರಾಣ ಬಿಟ್ಟ ಬುಡಕಟ್ಟು ಮಹಿಳೆ!
ಅಭಿವೃದ್ಧಿಯ ಮಂತ್ರ ಜಪಿಸುವ ನಮ್ಮ ವ್ಯವಸ್ಥೆಯ ಕಹಿ ವಾಸ್ತವಕ್ಕೆ ಕನ್ನಡಿ ಹಿಡಿಯುವಂತಹ ಕರುಣಾಜನಕ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ರಸ್ತೆಯೂ ಇಲ್ಲದೆ, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಕೂಡ (Rewa Tribal Woman Video) ಸಿಗದೆ ತೀವ್ರವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ ಬುಡಕಟ್ಟು ಮಹಿಳೆಯೊಬ್ಬರನ್ನು ಗ್ರಾಮಸ್ಥರು ಮಂಚದ ಮೇಲೆಯೇ ಹೊತ್ತುಕೊಂಡು ಆಸ್ಪತ್ರೆಗೆ ಓಡಿದ್ದಾರೆ. ಆದರೆ, ದುರದೃಷ್ಟವಶಾತ್ ಆಕೆ ಆಸ್ಪತ್ರೆ ತಲುಪುವ ಮುನ್ನವೇ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.…















