KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಕುಣಿಗಲ್ ಘಟಕದ ಚಾಲಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದು, ವಿಷಯ ತಿಳಿದ ಕೂಡಲೇ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಕೇಂದ್ರ ಕಚೇರಿಯ ಎಲ್ಲ ಅಧಿಕಾರಿಗಳು ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆಸ್ಪತ್ರೆಗೆ ಆಗಮಿಸಿ ಚಾಲಕ ನಾರಾಯಣ ಅವರ ಆರೋಗ್ಯ ವಿಚಾರಿಸಿ ನೌಕರನಿಗೆ ಧೈರ್ಯ ತುಂಬಿ ಸಾಂತ್ವಾನ ಹೇಳಿ, ಸಂಸ್ಥೆಯು ನಿಮ್ಮ ಪರವಾಗಿ ಇದೆ ಎಂದು ಮನವರಿಕೆ ಮಾಡಿದರು. ಘಟನೆ…
















